ರಾಜ್ಯ

ಚೈತ್ರಾ ಕುಂದಾಪುರ ಕೇಸ್: ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ- ಕಾಂಗ್ರೆಸ್

ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆದಿದ್ದು, ವಂಚನೆ ನಡೆದಿದ್ದು ಎಲ್ಲವೂ ಸಿಟಿ ರವಿ ಹಾಗೂ ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ತಿಳಿದಿತ್ತಂತೆ ಎಂದು ಹೇಳಿದೆ.

ಚೈತ್ರಾ ಕುಂದಾಪುರ ಕೇಸ್: ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ- ಕಾಂಗ್ರೆಸ್
ಚೈತ್ರಾ ಕುಂದಾಪುರ
Published On :

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆದಿದ್ದು, ವಂಚನೆ ನಡೆದಿದ್ದು ಎಲ್ಲವೂ ಸಿಟಿ ರವಿ ಹಾಗೂ ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ತಿಳಿದಿತ್ತಂತೆ ಎಂದು ಹೇಳಿದೆ. 

ಬಿಜೆಪಿ ಅಕ್ರಮವೊಂದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇಕೆ ಎಂದು ಪ್ರಶ್ನಿಸಿದೆ. ಬಿಜೆಪಿ ನಿಜಕ್ಕೂ ಹಣ ವಸೂಲಿ ಮಾಡಿ ಟಿಕೆಟ್ ನೀಡುವ ಕೆಲಸ ಮಾಡಿತ್ತೇ? ಎಂದು ಕೇಳಿದೆ. ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ, ಸೂಕ್ತ ಸಾಕ್ಷ್ಯಧಾರವಿದ್ದರೆ ಬಿಜೆಪಿಯ ದಂಡನಾಯಕರನ್ನೂ ಬಂಧಿಸಿ ವಿಚಾರಣೆ ನಡೆಸಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲ ಎಂದು ತಿಳಿಸಿದೆ. 

ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 40% ಕಮಿಷನ್ ವಿಧಾನಸೌಧದಲ್ಲಿ ಮಾತ್ರವಲ್ಲ ಜಗನ್ನಾಥ ಭವನದಲ್ಲೂ ಕಮಿಷನ್ ವ್ಯವಹಾರ ಇತ್ತು ಎಂಬುದು “ಟಿಕೆಟ್ ಹಗರಣ”ದಿಂದ ತಿಳಿಯುತ್ತಿದೆ. ಯಡಿಯೂರಪ್ಪನವರು ಸರ್ಕಾರದ ವಿರುದ್ಧ ರಾಜ್ಯ ಪ್ರವಾಸ ಮಾಡುವ ಬದಲು ಕಾಸಿಗಾಗಿ ಟಿಕೆಟ್ ಮಾರಾಟ ಮಾಡುವ ಭ್ರಷ್ಟ ಜನತಾ ಪಾರ್ಟಿಯನ್ನು ಸ್ವಚ್ಛಗೊಳಿಸಲು ಪ್ರವಾಸ ಮಾಡಲಿ ಎಂದು ತಾಕೀತು ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.