ರಾಜ್ಯ

ಬನ್ನೇರುಘಟ್ಟದಲ್ಲಿ ಪ್ರಾಣಿಗಳ ಸಾವು: ಉದ್ಯಾನವನ ಅಧಿಕಾರಿಗಳಿಂದ ವರದಿ ಸಲ್ಲಿಕೆ; ವೈರಸ್ ಹರಡುವ ಭೀತಿ

ಮಾರಕ ವೈರಸ್'ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಸರಣಿ ಸಾವು ವರದಿಯಾಗುತ್ತಿದ್ದು, ಇದರ ಬೆನ್ನಲ್ಲೇ ಉದ್ಯಾನವನದ ಅಧಿಕಾರಿಗಳು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಚಿರತೆ ಮರಿಗಳ ಸಾವಿಗೆ...

ಬನ್ನೇರುಘಟ್ಟದಲ್ಲಿ ಪ್ರಾಣಿಗಳ ಸಾವು: ಉದ್ಯಾನವನ ಅಧಿಕಾರಿಗಳಿಂದ ವರದಿ ಸಲ್ಲಿಕೆ; ವೈರಸ್ ಹರಡುವ ಭೀತಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮಾರಕ ವೈರಸ್'ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಸರಣಿ ಸಾವು ವರದಿಯಾಗುತ್ತಿದ್ದು, ಇದರ ಬೆನ್ನಲ್ಲೇ ಉದ್ಯಾನವನದ ಅಧಿಕಾರಿಗಳು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಚಿರತೆ ಮರಿಗಳ ಸಾವಿಗೆ ಕಾರಣ ಮತ್ತು ಕೈಗೊಂಡ ಕ್ರಮಗಳ ಕುರಿತು ಬುಧವಾರ ವರದಿ ಸಲ್ಲಿಸಿದ್ದಾರೆ.

ಬಿಬಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎವಿ ಸೂರ್ಯ ಸೇನ್ ಅವರು, ಕರ್ನಾಟಕ ಮೃಗಾಲಯ ಪ್ರಾಧಿಕಾರ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದ್ದಾರೆ.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಪಶುವೈದ್ಯರೊಬ್ಬರು ಮಾತನಾಡಿ, ಈ ಬೆಳವಣಿಗೆ ಕಳವಳಕಾರಿ ವಿಚಾರವಾಗಿದೆ. ಪ್ರಾಣಿಗಳಲ್ಲಿ ಫೆಲಿನ್‌ ಪ್ಯಾನ್ಲೂಕೋಪೇನಿಯಾ (ಎಫ್‌ಪಿವಿ) ಸೋಂಕು ಕಂಡು ಬಂದಿದೆ. ಇದರಿಂದ ದೇಶದ ಹಲವು ಮೃಗಾಲಯಗಳಲ್ಲಿ ಚಿರತೆಗಳು ಸಾವನ್ನಪ್ಪಿದ ನಿದರ್ಶನಗಳಿವೆ. ಈ ಕುರಿತು ಇತರೆ ರಾಜ್ಯಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಸಂಗ್ರಹಿಸಲಾಗಿದೆ. ಸಾಮಾನ್ಯವಾಗಿ ಬೆಕ್ಕುಗಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡು ಬರುತ್ತವೆ. ಕೆಲ ಸಾಕುಬೆಕ್ಕುಗಳು ಸಾವನ್ನಪ್ಪಿರುವ ಕುರಿತಂತೆಯೂ ಮಾಹಿತಿಗಳಿವೆ. ಹೀಗಾಗಿ ಸಾಕುಪ್ರಾಣಿಗಳ ಮಾಲೀಕರು ತಮ್ಮ ಸಾಕುಪ್ರಾಣಿಗಳ ಆರೋಗ್ಯ ದಾಖಲೆಗಳನ್ನು ತಮ್ಮ ಬಳಿ ಇರಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ.

ಮರಿಗಳಲ್ಲಿ ಸಾಮಾನ್ಯವಾಗಿ ಶಕ್ತಿ ದುರ್ಬಲವಾಗಿರುತ್ತವೆ. ಆದಾಗ್ಯೂ ವಯಸ್ಕ ಪ್ರಾಣಿಗಳಲ್ಲಿ ಸೋಂಕು ತಗುಲುವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಹೀಗಾಗಿ, ಎಲ್ಲಾ ಚಿರತೆಗಳ ಆರೋಗ್ಯ ತಪಾಸಣೆ ಕುರಿತು ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಚಿರತೆ ಮರಿಗಳ ಸಾವು ಈ ವೈರಸ್‌ನಿಂದ ಆಗಿರಬಹುದು. ಮರಣೋತ್ತರ ಪರೀಕ್ಷೆಗಳು ಸಾವಿಗೆ ಕಾರಣಗಳನ್ನು ಖಚಿತಪಡಿಸುತ್ತದೆ. ಈ ವರದಿಯನ್ನು ಅಧ್ಯಯನ ಮಾಡಲಾಗುತ್ತದೆ ವನ್ಯಜೀವಿ ವಿಭಾಗದ ಪಿಸಿಸಿಎಫ್ ಸುಭಾಷ್ ಮಲ್ಖಾಡೆ ತಿಳಿಸಿದ್ದಾರೆ. ಅಲ್ಲದೆ, ಬಿಬಿಪಿಯಲ್ಲಿ ಪ್ರಕಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.