ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ: ಪ್ರಮೋದ್ ಮುತಾಲಿಕ್ ವಿರುದ್ದ ಕೇಸ್ ದಾಖಲು
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ವಲಯ 8ರ ಸಹಾಯ ಆಯುಕ್ತ ಚಂದ್ರಶೇಖರಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.
ಇಂದು ಈದ್ಗಾ ಮೈದಾನದ ಗಣೇಶ ವಿಸರ್ಜನೆ ವೇಳೆ ಮೈದಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುತಾಲಿಕ್ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಎಂದು ವಾಗ್ದಾಳಿ ನಡೆಸಿದ್ದರು.
ಇದೀಗ ಇತರೆ ಧರ್ಮಗಳ ಭಾವನೆಗಳಿಗೆ ಧಕ್ಕೆ ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಮುತಾಲಿಕ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


