ಬೆಂಗಳೂರು: ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಕುಡಿದ ಮತ್ತಿನಲ್ಲಿ ತಂದೆಯಿಂದ ಸ್ನೇಹಿತನ ಕೊಲೆ
ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಪ್ಲಾಸ್ಕ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಪ್ಲಾಸ್ಕ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿ ಬಳಿಕ ಶವವನ್ನು ಸ್ಥಳಾಂತರ ಮಾಡಲು ಹೋಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಸೀಗೆಹಳ್ಳಿ ನಿವಾಸಿ ತೇಜೇಶ್ವರ್ ಕೊಲೆಯಾದ ವ್ಯಕ್ತಿ. ಆರೋಪಿ ಧರ್ಮೇಂದ್ರ ಸಿಂಗ್‌ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮದ್ಯ ವ್ಯಸನಿಯಾಗಿದ್ದ. ಬೆಳಿಗ್ಗೆಯೇ ಮದ್ಯ ಸೇವಿಸಿ ಕೆಲಸಕ್ಕೆ ತೆರಳುತ್ತಿದ್ದ. ಇದರಿಂದ ತೇಜೇಶ್ವರ್ ನನ್ನು ಹೋಟೆಲ್‌ನ ಸೆಕ್ಯೂರಿಟಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಇಬ್ಬರು ನೇಪಾಳ ಮೂಲದವರಾಗಿದ್ದಾರೆ.
ಬುಧವಾರ ಬೆಳಿಗ್ಗೆ ಆರೋಪಿ ಸೇರಿದಂತೆ ನಾಲ್ವರು ಬಾರ್‌ವೊಂದಕ್ಕೆ ತೆರಳಿ ಮದ್ಯ ಸೇವಿಸಿದ್ದರು. ಮಧ್ಯಾಹ್ನದ ಬಳಿಕ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿ ಮನೆಯೊಂದರಲ್ಲಿ ಪಾರ್ಟಿ ನಡೆಸುತ್ತಿದ್ದರು. ಆಗ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ, ತೇಜೇಶ್ವರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ.
ಮೃತದೇಹವನ್ನು ಮನೆಯಿಂದ ಹೊರಕ್ಕೆ ಸಾಗಿಸುವಂತೆ ಪರಿಚಯಸ್ಥ ವ್ಯಕ್ತಿಗೆ ಆರೋಪಿ ಕರೆ ಮಾಡಿದ್ದ. 10 ಸಾವಿರ ರು. ನೀಡುವುದಾಗಿಯೂ ಹೇಳಿದ್ದ. ವ್ಯಕ್ತಿ ನೀಡಿದ ಮಾಹಿತಿಯಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನೆ ನಡೆದ ವೇಳೆ ಆರೋಪಿ ಹೆಂಡತಿ ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ತೆರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


