ಕಾವೇರಿ ಪ್ರತಿಭಟನೆ: ಬೆಂಗಳೂರಿನ ತಮಿಳು ಪ್ರಾಬಲ್ಯ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ
ಕರ್ನಾಟಕದಲ್ಲಿ ಕಾವೇರಿ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡಿನ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಡಿಸಿಪಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚು ಅಲರ್ಟ್ ಆಗಿರುವಂತೆ ಸೂಚಿಸಿದ್ದಾರೆ.
ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ಪಿಟಿಐ ಗೆ ಮಾಹಿತಿ ನೀಡಿದ್ದಾರೆ.ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ವಿಜಯಪುರಗಳಲ್ಲಿ ಪ್ರತಿಭಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


