ರಾಜ್ಯ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿ ವಿಸ್ತರಣೆ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು,  ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ. 

ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.