ರಾಜ್ಯ

ರಾಜ್ಯದಲ್ಲಿ 8 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆದರೂ ದೂರಾಗುವುದಿಲ್ಲ ಸಂಕಷ್ಟ!

ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಎಂಟು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಆದರೂ ಈ ಮಳೆ ರಾಜ್ಯದ ಸಂಕಷ್ಟವನ್ನು ದೂರಾಗಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ 8 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆದರೂ ದೂರಾಗುವುದಿಲ್ಲ ಸಂಕಷ್ಟ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಎಂಟು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಆದರೂ ಈ ಮಳೆ ರಾಜ್ಯದ ಸಂಕಷ್ಟವನ್ನು ದೂರಾಗಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ ವರೆಗೆ ಶೇ.20 ಮಳೆ ಕೊರತೆ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.33 ಹಾಗೂ ಕೊಡಗಿನಲ್ಲಿ ಶೇ.43ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ಮಳೆ ಕೊರತೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ನೀಗಲಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ ಅವರು ಹೇಳಿದ್ದಾರೆ.

ಆದರೆ, ಈ 8 ದಿನಗಳ ಮಳೆಯು ಪ್ರಸ್ತುತ ಎದುರಾಗಿರುವ ಮಳೆಯ ಕೊರತೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮತ್ತೊಬ್ಬ ಅಧಿಕಾರಿಗಳು ತಿಳಿಸಿದ್ದಾರೆ.

ಅತಿ ಹೆಚ್ಚು ಮಳೆಯಾದರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು. ಆದರೆ, ಅದು ಸಾಧ್ಯವಿಲ್ಲ. ಈಶಾನ್ಯ ಮಾನ್ಸೂನ್ ಸಮಯದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹವಾಮಾನ ವ್ಯವಸ್ಥೆಗಳು ರೂಪುಗೊಂಡಾಗ ಮಾತ್ರ ಮಳೆ ಸಾಧ್ಯವಾಗುತ್ತದೆ. ಹಾಗಾಗಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್‌ನಲ್ಲಿಯೂ ನೀರಿನ ಕೊರತೆ ಮುಂದುವರಿಯುವ ಸಾಧ್ಯತೆಗಳಿವೆ. ತಮಿಳುನಾಡಿನಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.