ಉಪನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ ವಿಸ್ತರಣೆ: ಸೆಪ್ಟೆಂಬರ್ 30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಓಪನ್
ಉಪನೋಂದಣಾಧಿಕಾರಿ ಕಚೇರಿಗಳು ಶನಿವಾರ (ಸೆ.23) ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಕಾರ್ಯ ನಿರ್ವಹಿಸಲಿವೆ.

ಬೆಂಗಳೂರು: ಉಪನೋಂದಣಾಧಿಕಾರಿ ಕಚೇರಿಗಳು ಶನಿವಾರ (ಸೆ.23) ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಕಾರ್ಯ ನಿರ್ವಹಿಸಲಿವೆ.
2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಇಂದಿನಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತಾಗಿ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿಆರ್ ಮಮತಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಚೇರಿ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.
ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡ ಈ ಕಾರ್ಯ ನಿರ್ವಹಣೆ ಇರಲಿದ್ದು, ಹೆಚ್ಚುವರಿ ಕೆಲಸದ ಅವಧಿ ಸೆ. 30 ರವರೆಗೆ ಮಾತ್ರ ಅನ್ವಯ ಆಗಲಿದೆ ಎಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


