ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.
ಗೋಮಾಂಸ ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಗೋಮಾಂಸ ಸಾಗಾಟ ಮಾಡುವರು ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ.
ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗೂಡ್ಸ್ ವಾಹನಗಳಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ ಹಸುಗಳ ರುಂಡಗಳನ್ನು ಇರಿಸಿದ್ದಾರೆ. ಈ ವೇಳೆ ಕಾರ್ಯಕರ್ತ ಗೋಮಾಂಸ ಸಾಗಿಸುತ್ತಿದ್ದವನ ಎದಗೆ ಒದ್ದಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು.
ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಮೊಕ್ಕಾಂ ಹೂಡಿದ್ದಾರೆ. ಐಬಿ ವೃತ್ತ ಹಾಗೂ ಗುಂಜೂರು ಟೋಲ್ಗಳ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


