ರಾಜ್ಯ

ಬೀದರ್: ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರ ಬಂಧನ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೀದರ್: ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರ ಬಂಧನ
ಮಸೀದಿ ಮೇಲೆ ಭಗವಾಧ್ವಜ ಹಾರಿಸಿರುವುದು.
Published On :

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡಿದ್ದರು.

ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಡಿವೈಎಸ್ಪಿ ನ್ಯಾಮೇಗೌಡ , ಬಸವಕಲ್ಯಾಣ ಗ್ರಾಮೀಣ ಪೋಲಿಸ್ ಠಾಣೆ ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿ, ಮಸೀದಿ ಮೇಲೆ ಹಾರಿಸಿದ ಭಾಗವಾಧ್ವಜ ತೆರವುಗೊಳಿಸಿ ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದರು.

ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಎಸ್.ಪಿ. ಚನ್ನಬಸವಣ್ಣ ಎಸ್.ಎಲ್., ಡಿವೈಎಸ್ ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್‌ ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಪೋಲಿಸ್ ಠಾಣೆ ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ. ಮಸೀದಿ ಮೇಲೆ ಭಾಗವಾಧ್ವಜ ಹಾರಿಸಿದ ಅದೇ ಗ್ರಾಮದ ನಾಲ್ವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅಭಿಷೇಕ, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ ಬಿರಾದಾರ ಎಂದು ಗುರ್ತಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.