ರಾಜ್ಯ

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದರು.

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ
ಸಚಿವ ಕೆ.ಹೆಚ್.ಮುನಿಯಪ್ಪ
Published On :

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ಪರಿಚಯಿಸಲು ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಲಾಗಿತ್ತು. ಆಯೋಗ ಸಿದ್ಧಪಡಿಸಿರುವ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಸರ್ಕಾರವು ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸುತ್ತದೆ ಎಂದು ಹೇಳಿದರು.

ಎಲ್ಲಾ ಎಸ್‌ಸಿ ಸಮುದಾಯಗಳಿಗೆ ನ್ಯಾಯ ಒದಗಿಸಲು ಒಳ ಮೀಸಲಾತಿಯನ್ನು ನ್ಯಾಯಯುತವಾಗಿ ವರ್ಗೀಕರಿಸಲಾಗುವುದು. ನಾವು ನುಡಿದಂತೆ ನಡೆದಿದ್ದೇವೆ, ಈಗಾಗಲೇ ನಾಲ್ಕು ಗ್ಯಾರಂಟಿ‌ಗಳನ್ನು ಜಾರಿ ಮಾಡಿದ್ದೇವೆ, ಇನ್ನೊಂದು ಡಿಸೆಂಬರ್ ನಂತರ ಜಾರಿ ಮಾಡುತ್ತೇವೆ, ಇನ್ನು ಅನ್ನಭಾಗ್ಯದ ವಿಷಯದಲ್ಲಿ ಈ ತಿಂಗಳು ಹಣ ಕೊಡುತ್ತೇವೆ, ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ, ಒಂದು ಕೋಟಿ ಹತ್ತು ಲಕ್ಷ ಹಣವನ್ನು ಖಾತೆಗಳಿಗೆ ಹಾಕುತ್ತೇವೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.