ರಾಜ್ಯ

ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.

ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ
ಪರೀಕ್ಷೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.

ಸೆ.26, 28, 29 ರಂದು ನಡೆಯಬೇಕಿದ್ದ  ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಂದೂಡಿದೆ. ಕುಲಸಚಿವ ಕೆಬಿ ಪ್ರವೀಣ್ ಪರೀಕ್ಷೆಗಳನ್ನು ಮುಂದೂಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ. 

ಸೆ.26, 28, 29 ರಂದು ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ ಪರೀಕ್ಷೆಗಳು ನಡೆಯಬೇಕಿತ್ತು.

ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.