ರಜತ ಮಹೋತ್ಸವದ ಸಂಭ್ರಮದಲ್ಲಿ ಬಿಎಂಟಿಸಿ: 'ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ
25ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೋಮವಾರ ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ ನೀಡುತ್ತಿದೆ.

ಬೆಂಗಳೂರು: 25ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೋಮವಾರ ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ ನೀಡುತ್ತಿದೆ.
ಈ ಅಪ್ಲಿಕೇಶನ್ ಜನರಿಗೆ ನೈಜ-ಸಮಯದ ಆಧಾರದ ಮೇಲೆ ಬಸ್‌ಗಳನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ ಮತ್ತು ಬಸ್ ಮಾರ್ಗಗಳು ಮತ್ತು ಬಸ್ ನಿಲ್ದಾಣಗಳ ಮಾಹಿತಿಯನ್ನು ಒದಗಿಸುತ್ತದೆ.
ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಮೊಬೈಲ್ ಅಪ್ಲಿಕೇಶನ್ ಸಾರ್ವಜನಿಕ ಬಳಕೆಗೆ ಲಭ್ಯವಿದ್ದು, ಆ್ಯಪ್'ನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಇಂದು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.
ಕೆಎಸ್‌ಆರ್‌ಟಿಸಿಯಿಂದ ಪ್ರತ್ಯೇಕಗೊಂಡು ಬಿಎಂಟಿಸಿ ಉದಯವಾಗಿ 25 ವರ್ಷಗಳು ಕಳೆದಿವೆ. ಇದರ ಸ್ಮರಣಾರ್ಥಕವಾಗಿ ಸ್ಮರಣಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಸ್ ನಿಗಮದ ಮೂಲಗಳು ಮಾಹಿತಿ ನೀಡಿವೆ.
ಇದೇ ಸಂದರ್ಭದಲ್ಲಿ ಕೆಂಪೇಗೌಡ ಬಸ್ ಟರ್ಮಿನಲ್‌ನಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರಿಗೆ ಮೀಸಲಾಗಿರುವ ಕ್ಯಾಂಟೀನ್ ಅನ್ನು ಅನಾವರಣಗೊಳಿಸಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಜೀವ ಕಳೆದುಕೊಂಡ ನೌಕರರ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಅಪಘಾತಗಳಿಲ್ಲದೆ ಬಸ್‌ಗಳನ್ನು ಚಲಾಯಿಸಿದ ಚಾಲಕರಿಗೆ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


