ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 6 ಕಾರುಗಳು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ 6 ಕಾರುಗಳ ನಡುವೆ ಸರಣಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 6 ಕಾರುಗಳು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ 6 ಕಾರುಗಳ ನಡುವೆ ಸರಣಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರು ಕಡೆ ಸಾಲಾಗಿ ಹೋಗ್ತಿದ್ದ ಕಾರುಗಳು ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ನಿಯಂತ್ರಣ ತಪ್ಪಿ ಒಂದರ ಹಿಂದೆ ಒಂದರಂತೆ ಬಂದು ಡಿಕ್ಕಿ ಹೊಡೆದಿವೆ. ಈ ವೇಳೆ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತಕ್ಕೀಡಾದ ಕಾರುಗಳೆಲ್ಲವೂ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದವು. ಈ ಪ್ರಕರಣದಲ್ಲಿ ಸ್ಯಾಂಟ್ರೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಮೂಲದ ರೇಣುಕಮ್ಮ, ಮಂಜುಳಾ, ಸುಧೀರ್ ಮೃತಪಟ್ಟವರು.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂತುರು ಮಳೆಯಿದ್ದ ಹಿನ್ನೆಲೆಯಲ್ಲಿ ಕಾರುಗಳು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.