ರಾಜ್ಯ

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ಶಾರದಾ ಪಾಟೀಲ್
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಶಾರದಾ ಪಾಟೀಲ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು. ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

ಶಾರದಾ ಪಾಟೀಲ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಶಾರದಾ ಪಾಟೀಲ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.