ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನ
ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಗದಗ: ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಶಾಲಾ ಅವಧಿ ಮುಗಿದ ನಂತರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯನ್ನು ತನ್ನ ಕಚೇರಿಗೆ ಕರೆಸಿಕೊಳ್ಳುತ್ತಿದ್ದ. ಶನಿವಾರ ಸಹ ಮನೆಗೆ ತಡವಾಗಿ ಹೋಗುವಂತೆ ಹೇಳಿ ತನ್ನ ಆಫೀಸ್‌ಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದ. ಈ ವಿಷಯ ಮನೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆಯನ್ನು ಸಹ ಹಾಕಿದ್ದರು ಎಂದು ಆರೋಪಿಸಲಾಗಿದೆ.
ಇದಾದ ಬಳಿಕ ಬಾಲಕಿ ಇನ್ಮುಂದೆ ಶಾಲೆಗೆ ಹೋಗುವುದಿಲ್ಲ ಎಂದು ಮನೆಯವರ ಬಳಿ ಅಳುತ್ತಾ ಹೇಳಿದ್ದಾಳೆ. ಈ ಬಗ್ಗೆ ಪೋಷಕರು ಯಾಕೆ, ಏನು ಎಂದು ವಿಚಾರಿಸಿದಾಗ ಮುಖ್ಯ ಶಿಕ್ಷಕನ ಕಾಮ ಪುರಾಣವನ್ನು ಬಾಲಕಿ ಬಿಚ್ಚಿಟ್ಟಿದ್ದಾಳೆ.
ನಂತರ ಬಾಲಕಿಯ ಕುಟುಂಬಸ್ಥರು ಸಹಾಯವಾಣಿ ಮೂಲಕ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡ ನರಗುಂದ ಪೊಲೀಸ್ ಠಾಣೆಯ ಪೊಲೀಸರು, ಮುಖ್ಯ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


