ಕಾವೇರಿ ವಿವಾದ: ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ!
ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ನಿಂದಿಸಿ ಟ್ವಿಟ್ಟರ್ ಖಾತೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ರಾಜಕಾರಣ, ದ್ವೇಷ ಮರೆತು ಎಲ್ಲರೂ ಒಂದಾಗಿ ಕಾವೇರಿ ನೀರನ್ನು ಉಳಿಸಿಕೊಳ್ಳಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಆದರೆ ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ನಿಂದಿಸಿ ಟ್ವಿಟ್ಟರ್ ಖಾತೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ.
ಸೂಲಿಬೆಲೆ ಅವರನ್ನು ಬೆಂಬಲಿಸುತ್ತಿದ್ದ ಅವರ ಅಭಿಮಾನಿಗಳೇ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ‘ಸಿದ್ರಾಮ’ ಹೆಸರನ್ನು ಹಿಂಬದಿಯಿಂದ ಓದಿದರೆ ಗೊತ್ತಾಗುತ್ತೆ ಸಿದ್ದರಾಮಯ್ಯ ಯಾಕೆ ತಮಿಳುನಾಡಿಗೆ ನೀರು ಬಿಟ್ಟರು ಎಂದು ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದು ಹಿಗ್ಗಾಮಗ್ಗಾ ಜಾಡಿಸಿದ್ದಾರೆ. ಸೂಲಿಬೆಲೆ ಟ್ವೀಟ್ಗೆ ಹಲವರು ಆಕ್ರೋಶಗೊಂಡಿದ್ದಾರೆ.
ನೀವಾದ್ರೂ ಲ್ಯಾಪ್ ಟಾಪ್ ಕನೆಕ್ಟ್ ಮಾಡಿ ಮೋದಿಗೆ ಹೇಳಿ ಕರ್ನಾಟಕ ನೀರನ್ನು ಉಳಿಸಿ ಎಂದು. ಈ ತರ ಚೀಪ್ ಪೋಸ್ಟ್ ಮಾಡಬೇಡಿ, ನಿಮ್ಮ ಘನತೆಯನ್ನು ಕಾಪಾಡಿಕೊಳ್ಳಿ ಎಂದು ನೆಟ್ಟಿಗರು ಸಲಹೆ ಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


