100 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ಕೊರಿಯೋಗ್ರಾಫರ್ ಗೆ 56,000 ರೂ. ದಂಡ!
99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ.

ಬೆಂಗಳೂರು: 99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ. ಸ್ಕೂಟರ್ ವಶಕ್ಕೆ ಪಡೆದಿರುವ ಪೊಲೀಸರು, ದಂಡ ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ. ಇಲ್ಲದಿದ್ದರೆ (ಪ್ರಸ್ತುತ ಮೌಲ್ಯ ರೂ. 15,000ಕ್ಕೆ) ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವೈರಲ್ ಆಗಿರುವ ವೀಡಿಯೊದಲ್ಲಿ, ನೃತ್ಯ ನಿರ್ದೇಶಕರು ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಲ್ಲಿ ಅಪಾಯಕಾರಿಯಾಗಿ ಸವಾರಿ ಮಾಡುತ್ತಿರುವುದು, ಇತರ ಪ್ರಯಾಣಿಕರಿಗೆ ಬೆದರಿಕೆಯನ್ನುಂಟು ಮಾಡುತ್ತಿರುವುದು ಕಾಣುತ್ತಿದೆ. ಇದು ಕಾರಿನ ಡ್ಯಾಶ್‌ಕ್ಯಾಮ್‌ನಿಂದ ಸ್ಪಷ್ಟವಾಗಿ ಸೆರೆಹಿಡಿಯಲ್ಪಟ್ಟಿದೆ.
ನಿಯಮ ಉಲ್ಲಂಘಿಸಿದ ಕೊರಿಯೋಗ್ರಾಫರ್ ನನ್ನು ಬಿಳೇಕಹಳ್ಳಿ ನಿವಾಸಿ ಹಸನ್ ರೆಹಮಾನ್ (25) ಎಂದು ಗುರುತಿಸಲಾಗಿದೆ. ರೆಹಮಾನ್ ಬಿಟಿಎಂ ಎರಡನೇ ಹಂತದಲ್ಲಿ ಡ್ಯಾನ್ಸ್ ಸ್ಟುಡಿಯೋ ನಡೆಸುತ್ತಿದ್ದಾರೆ. ಸಂಚಾರ ಉಲ್ಲಂಘನೆಗಳಲ್ಲಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ 54 ಪ್ರಕರಣಗಳು, 34 ದೋಷಪೂರಿತ ನಂಬರ್ ಪ್ಲೇಟ್ ಪ್ರಕರಣಗಳು, ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ ಐದು ಪ್ರಕರಣಗಳು, ನೋ ಎಂಟ್ರಿ ಮೂರು ಮತ್ತು ನೋ ಪಾರ್ಕಿಂಗ್, ಜೀಬ್ರಾ ಕ್ರಾಸಿಂಗ್‌ನಲ್ಲಿ ಪಾರ್ಕಿಂಗ್ ಮತ್ತು ಟ್ರಿಪಲ್ ರೈಡಿಂಗ್ ಸೇರಿದಂತೆ ತಲಾ ಒಂದು ಪ್ರಕರಣಗಳು ಸೇರಿವೆ ಎಂದು ಪೊಲೀಸರು ಹೇಳಿದ್ದಾರೆ.
ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ಸಂಚಾರ (ದಕ್ಷಿಣ) ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ. 56,000 ರೂ. ಪಾವತಿಸಲು ರೆಹಮಾನ್‌ಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡ ಪಾವತಿಸುವಲ್ಲಿ ವಿಫಲವಾದರೆ, ಅವರ ವಾಹನವನ್ನು ಹರಾಜು ಮಾಡಲಾಗುವುದು ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐಪಿಸಿ ಮತ್ತು ಭಾರತೀಯ ಮೋಟಾರ್ ವಾಹನ (ಐಎಂವಿ) ಕಾಯ್ದೆಯಡಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


