ಬೆಳಗಾವಿ: ಇನ್‌ಸ್ಟಾಗ್ರಾಮ್ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ; ಮೂವರು ಅಪ್ರಾಪ್ತರು ವಶಕ್ಕೆ, ಓರ್ವನ ಬಂಧನ
ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವ ದುರಂತ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ.

ಬೆಳಗಾವಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವ ದುರಂತ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ. ಈ ಸಂಬಂಧ ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆಯಲಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 26 ರಂದು ಸಂಜೆ ಈ ಘಟನೆ ನಡೆದಿದೆ.
ಮೃತ ಸುಂಕದ ಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಹುಡುಗಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಂಕದ ಅವರಿಗೆ ಸಂದೇಶ ಕಳುಹಿಸುತ್ತಿದ್ದರು.
ಈ ವಿಷಯ ತಿಳಿದ ಸಂತ್ರಸ್ತ ಆರೋಪಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿಗಳು ಗುಂಪುಗೂಡಿ ಸುಂಕದ ಜತೆ ಜಗಳವಾಡಿದ್ದಾರೆ. ಬಳಿಕ ಸುಂಕದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸುಂಕದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


