ಕಾವೇರಿ ನೀರಿಗಾಗಿ ಹೋರಾಟ ತೀವ್ರ: ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು, ಮಂಡ್ಯದಲ್ಲಿ ಪ್ರತಿಭಟನೆ
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದಿದ್ದು, ನೂರಾರು ರೈತರು ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದಿದ್ದು, ನೂರಾರು ರೈತರು ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಲ್ಲದೆ, ಕಾವೇರಿ ನದಿ ಬಳಿಯೂ ಜಮಾಯಿಸಿರುವ ರೈತರು ಬಾಯಿ ಬಡಿದುಕೊಂಡು, ನ್ಯಾಯ ಬೇಕೆಂದು ಆಗ್ರಹಿಸುತ್ತಿದ್ದಾರೆ.
ಈ ನಡುವೆ ನಗರದಲ್ಲೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದರ ಫೋಟೋಗಳನ್ನು ಹಿಡಿದಿರುವ ಕಾರ್ಯಕರ್ತರು, ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಮಾತನಾಡಿ, ಕನ್ನಡಿಗರು ನಿಮಗೆ ಓಟ್ ಹಾಕಿರುವುದು ರಾಜ್ಯದ ಹಿತಕಾಯುವ ಸಲುವಾದಿ. ನೆಲ-ಜಲ ಕಾಯುವ ಸಲುವಾಗಿ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದ ಲಕ್ಷಾಂತರ ಕೋಟಿ ಹಣವನ್ನು ಉತ್ತರ ಭಾರತದವರಿಗೆ ಹಂಚಿಕೆ ಮಾಡಲಾಗುತ್ತದೆ. ಕರವೇ ಕಾರ್ಯಕರ್ತರು ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ದರೆ ರಾಜೀನಾಮೆ ಕೊಡಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


