ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು.
ರಸ್ತೆ ತಡೆಗೆ ಯತ್ನಿಸಿದ 700 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
ಬಂದ್ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್, ಬಂದ್ ನಗರದಲ್ಲಿ ಶಾಂತಿಯುತವಾಗಿ ಮುಕ್ತಾಯವಾಯಿತು. ಎಲ್ಲಿಯೂ ಕಲ್ಲು ತೂರಾಟ, ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಕೆಲಸಗಳಾಗಲೀ, ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನಾಗಲೀ ನಿಲ್ಲಿಸುವ ಕೆಲಸಗಳಾಗಿಲ್ಲ.
ಮುನ್ನೆಚ್ಚರಿಕಾ ಕ್ರಮವಾಗಿ 785 ಪ್ರತಿಭಟನಾ ನಿರತರನ್ನು ಬಂಧಿಸಿ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಆಯುಕ್ತರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


