ರಾಜ್ಯ

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ

ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ 23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ
ಡಿಸಿಎಂ ಡಿಕೆ ಶಿವಕುಮಾರ್, ಈಶ್ವರ್ ಖಂಡ್ರೆ ಮಾತುಕತೆ
Published On :

ಬೆಂಗಳೂರು: ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ  23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಗೃಹ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚಿಸಿದ ಈಶ್ವರ ಖಂಡ್ರೆ, ಈಗಾಗಲೇ ಕಾರಂಜಾ ಜಲಾಶಯ, ಅತಿವಾಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ತಮ್ಮ ಸ್ವಕ್ಷೇತ್ರ ಭಾಲ್ಕಿ ತಾಲೂಕಿನ ನೀರಾವರಿ ಪ್ರದೇಶ ಹೆಚ್ಚಳ ಮಾಡಲಾಗಿದೆ. ಮೆಹಕರ್ ಏತ ನೀರಾವರಿ ಯೋಜನೆ ಕಾರ್ಯಗತಗೊಳಿಸಬೇಕಿದೆ ಎಂದರು.

ಕಾರಂಜಾ ಯೋಜನೆಗೆ ಹಲವು ವರ್ಷಗಳ ಹಿಂದೆ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ದೊರಕಿಲ್ಲ ಎಂಬ ಬೇಡಿಕೆ ಇದೆ.  ಕಾರಂಜಾ ಸಂತ್ರಸ್ತರ ದೀರ್ಘ ಕಾಲದ ಬೇಡಿಕೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಒಂದು ಬಾರಿಯ ಆಧಾರದ ಮೇಲೆ ಪರಿಹರಿಸಬೇಕಿದೆ ಮತ್ತು ಬೀದರ್ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಕಾರ್ಯಗತಗೊಳಿಸಬೇಕಿದೆ ಎಂಬ ಅಂಶವನ್ನು ಗಮನಕ್ಕೆ ತಂದರು.

ಕಲ್ಯಾಣ ಕರ್ನಾಟಕ ಭಾಗದ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವ ಮತ್ತು ಬಾಕಿ ಇರುವ ಯೋಜನೆ ಆರಂಭಿಸುವ ಕುರಿತಂತೆಯೂ ಸಮಾಲೋಚಿಸಿದರು.

ಪಕ್ಷ ಸಂಘಟನೆಗೆ ಒತ್ತು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ ಆದ ಈಶ್ವರ ಖಂಡ್ರೆ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತ್ತು ಲೋಕಸಭಾ ಚುನಾವಣೆಗೆ ಅಣಿಗೊಳಿಸುವ ಕುರಿತಂತೆಯೂ ಗಂಭೀರ ಚರ್ಚೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.