ಮನೆಯಲ್ಲಿ ಆಕಸ್ಮಿಕ ಬೆಂಕಿ: ಇಬ್ಬರು ಮಕ್ಕಳು ಸೇರಿ 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ 6 ಮಂದಿಗೆ ಗಾಯವಾಗಿರುವ ಘಟನೆಯೊಂದು ಶಿರಾದ ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದಲ್ಲಿ ಶುಕ್ರವಾರ ನಡೆದಿದೆ.

ತುಮಕೂರು: ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ 6 ಮಂದಿಗೆ ಗಾಯವಾಗಿರುವ ಘಟನೆಯೊಂದು ಶಿರಾದ ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದಲ್ಲಿ ಶುಕ್ರವಾರ ನಡೆದಿದೆ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಅಡುಗೆ ಅನಿಲ ಸಿಲಿಂಡರ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಅನಿಲ ಸೋರಿಕೆಯಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ತಂಡದವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ನದೀಮ್, ಗುಲಾಬ್ ಜಾನ್, ನಿಜಾಮ್, ಸಾಧಿಕಾ ಮತ್ತು ಮಕ್ಕಳಾದ ಜೆಬಿ, ಆಬಿದಾ ಅವರಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಗ್ನಿ ಅವಘಡದ ವೇಳೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ಶಿರಾ ಶಾಸಕ ಟಿಬಿ.ಜಯಚಂದ್ರ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.
ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಾಗಿದ್ದು, ಇದನ್ನು ತಿಳಿಯದೆ ಸ್ಟೌವ್ ಹಚ್ಚಲು ಹೋದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


