ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯ
ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬೆಂಗಳೂರು: ಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಎರಡು ವರ್ಷಗಳಿಂದ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಈ ರೀತಿ ಹೇಳಿದ್ದಾರೆ.
ಈ ಕುರಿತು ಕನ್ನಡಪ್ರಭ ಆನ್ ಲೈನ್ ನಲ್ಲಿ ವರದಿಯಾಗಿತ್ತು. ಇದನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ ಎಂದಿದ್ದಾರೆ.
ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಷಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


