ರಾಜ್ಯ

ಕನಕಪುರದಲ್ಲಿ ಗೋಸಾಗಣೆ ವಾಹನದ ಮೇಲೆ ದಾಳಿ, ಓರ್ವನ ಹತ್ಯೆ: ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್!

ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ.

ಕನಕಪುರದಲ್ಲಿ ಗೋಸಾಗಣೆ ವಾಹನದ ಮೇಲೆ ದಾಳಿ, ಓರ್ವನ ಹತ್ಯೆ: ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್!
ಮುಸ್ಲಿಂ ಸಮುದಾಯದ ಪ್ರತಿಭಟನೆ
Published On :

ಬೆಂಗಳೂರು: ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ. 

ವಾಹನದೊಳಗಡೆ ವ್ಯಕ್ತಿಯೋರ್ವ ಅಳುತ್ತಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ ಎಂದು ಟ್ವೀಟ್ ಮಾಡಿದೆ.

ಮತ್ತೊಂದು ಟ್ವೀಟ್ ನಲ್ಲಿ  40% ಕಮಿಷನ್ ಪಡೆದು ಆರಾಮಾಗಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ಸರ್ಕಾರ ಹೊಣೆಯಲ್ಲವೇ? ಎಂದು ಪ್ರಶ್ನಿಸಿದ್ದು, ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ ಎಂದು ತಾಕೀತು ಮಾಡಿದೆ. 
 

ಪೊಲೀಸರು ಈ ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.