ಚುನಾವಣಾ ಆಯೋಗದಿಂದ ಮತದಾನದ ಬಗ್ಗೆ ಹೀಗೊಂದು ಕ್ಯೂಟ್ ಪ್ರೇಮಪತ್ರ....
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ. ಮುಂದಿನ ತಿಂಗಳು ಮೇ 10ರಂದು ಒಂದೇ ಹಂತದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ. ಮುಂದಿನ ತಿಂಗಳು ಮೇ 10ರಂದು ಒಂದೇ ಹಂತದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಎಲ್ಲಾ ಅರ್ಹ ಮತದಾರರು ತಮ್ಮ ಹಕ್ಕು ಚಲಾಯಿಸಿ ಯೋಗ್ಯ ಅಭ್ಯರ್ಥಿಯನ್ನು ವಿಧಾನಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ವಯಸ್ಕ ಮತದಾರರಲ್ಲಿರುತ್ತದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಚುನಾವಣೆಯ ಮಹತ್ವ, ಮತದಾರರ ಜವಾಬ್ದಾರಿಯ ಬಗ್ಗೆ ತಿಳುವಳಿಕೆ ನೀಡುತ್ತಾ ಬಂದಿದೆ.
ಪ್ರತಿದಿನ ಸೆಲೆಬ್ರಿಟಿಗಳು, ಗಣ್ಯ ವ್ಯಕ್ತಿಗಳ ಮೂಲಕ ಮತ ಚಲಾಯಿಸುವ ಅಗತ್ಯವನ್ನು ಕರ್ನಾಟಕ ಚುನಾವಣಾ ಆಯೋಗ ಸಾರುತ್ತಿದೆ. ವೋಟ್, ಮತವನ್ನು ವ್ಯಕ್ತಿಯಾಗಿ ಬಿಂಬಿಸಿ ಅದಕ್ಕೆ ಒಂದು ಕ್ಯೂಟ್ ಪ್ರೇಮ ಪತ್ರ ಬರೆದ ರೀತಿಯಲ್ಲಿ ಮತ ಚಲಾಯಿಸುವುದು ಪ್ರಜೆಗಳಿಗೆ ಎಷ್ಟು ಮುಖ್ಯ, ಮತದಾನ ಮಾಡುವ ಹಕ್ಕನ್ನು ತಪ್ಪಿಸಿಕೊಳ್ಳಬಾರದು ಎಂಬುದನ್ನು ಇದು ಸಾರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


