ಬೆಂಗಳೂರು: ಸಾರಿ-ಐಎಲ್ಐ ಜೊತೆಗೆ ನಗರದಲ್ಲಿ ಹೆಚ್ಚುತ್ತಿದೆ ಜಠರಗರುಳಿನ ಸೋಂಕು!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಾರಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವಲ್ಲೇ ಇದೀಗ ಜಠರಗರುಳಿನ ಸೋಂಕು ಜನರ ನಿದ್ದೆಗೆಡುವಂತೆ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಾರಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವಲ್ಲೇ ಇದೀಗ ಜಠರಗರುಳಿನ ಸೋಂಕು ಜನರ ನಿದ್ದೆಗೆಡುವಂತೆ ಮಾಡಿದೆ.
ಬೇಸಿಗೆ ಆರಂಭವಾಗಿದ್ದು, ಇಷ್ಟು ದಿನ ತೀವ್ರವಾಗಿ ಕಾಡುತ್ತಿದ್ದ ಅಡೆನೊವೈರಸ್, ಎಚ್3ಎನ್2 ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳಲ್ಲಿ ಕಳೆದ 2 ತಿಂಗಳಿಗೆ ಹೋಲಿಕೆ ಮಾಡಿದರೆ. ಶೇ.50 ರಷ್ಟು ಪ್ರಕರಣಗಳು ಕಡಿಮೆಯಾಗಿರುವುದು ಕಂಡು ಬಂದಿದೆ. ಆದರೆ, ಹವಾಮಾನ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಜಠರಗರುಳಿನ ಸಂಬಂಧಿತ ಸೋಂಕುಗಳ ಪ್ರಕರಣಗಳಲ್ಲಿ ಹೆಚ್ಚಳಗಳು ಕಂಡು ಬರುತ್ತಿವೆ ಎಂದು ವೈದ್ಯರು ಹೇಳಿದ್ದಾರೆ.
ಸಕ್ರಾ ವರ್ಲ್ಡ್ ಆಸ್ಪತ್ರೆಯ ಹಿರಿಯ ಸಲಹೆಗಾರ ಮತ್ತು ವಿಭಾಗದ ಮುಖ್ಯಸ್ಥ (ಪೀಡಿಯಾಟ್ರಿಕ್ಸ್ ಮತ್ತು ನಿಯೋನಾಟಾಲಜಿ) ಡಾ ರಜತ್ ಅಥ್ರೇಜಾ ಮಾತನಾಡಿ, “ಕೋವಿಡ್ ಪ್ರಕರಣಗಳ ಹೆಚ್ಚಳವು ಗಮನಾರ್ಹವಾಗಿಲ್ಲ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಬಹಳ ಕಡಿಮೆಯಿದೆ. ನಿರೀಕ್ಷೆಯಂತೆ, ILI/SARI ಪ್ರಕರಣಗಳ ಸಂಖ್ಯೆಯು 50 ಪ್ರತಿಶತದಷ್ಟು ಕಡಿಮೆಯಾಗಿದೆ. ಮಾರ್ಚ್ ವರೆಗೆ ಪ್ರತಿದಿನ ಸುಮಾರು 30 ಹೊರ ರೋಗಿಗಳು ಬರುತ್ತಿದ್ದರು, ಆದರೆ, ಈಗ ಆ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ಆಹಾರ ಕಲುಷಿತಗೊಳ್ಳುವುದು, ವೇಗವಾಗಿ ಕೆಡುವುದು ಹೊಟ್ಟೆಗೆ ಸಂಬಂಧಿಸಿದ ಸೋಂಕುಗಳು ಹೆಚ್ಚಾಗಲು ಕಾರಣವಾಗುತ್ತಿದವೆ. ಕಳೆದ ಕೆಲವು ದಿನಗಳಿಂದ ಅವರು ಪ್ರತಿದಿನ ವಾಂತಿ, ಅತಿಸಾರ ಹಾಗೂ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸದಸ್ಯರೊಬ್ಬರು ಮಾತನಾಡಿ, ಕೋವಿಡ್ ಪ್ರಕರಣಗಳ ಹೆಚ್ಚಳವು ಮುಂಬರುವ ತಿಂಗಳುಗಳಲ್ಲಿ ಇದೇ ರೀತಿ ಮುಂದುವರೆಯಲು ಸಾಧ್ಯತೆಯಿಲ್ಲ. ಚುನಾವಣೆಗೆ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ಮತದಾನದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕೋವಿಡ್ ಸೂಕ್ತ ನಡವಳಿಕೆ (ಸಿಎಬಿ) ಅನುಸರಿಸುವಲ್ಲಿ ಜನರ ನಿರ್ಲಕ್ಷ್ಯವು ಒಂದು ಕಾರಣವಾಗಿದ ಎಂದು ತಿಳಿಸಿದ್ದಾರೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ಹೊಸ ಮಾರ್ಗಸೂಚಿಗಳ ಜಾರಿಗೊಳಿಸುವ ಅಗತ್ಯವಿಲ್ಲ, ನಾಗರಿಕರು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು. ರೋಗಲಕ್ಷಣಗಳಿದ್ದರೆ ಪರೀಕ್ಷೆಗೆ ಒಳಗಾಗಬೇಕು. ಸೋಂಕಿತ ಜನರು ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


