ರಾಜ್ಯ

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮನೆಯಲ್ಲಿ ಏಕಾಂಗಿಯಾಗಿ ನೆಲೆಸಿದ್ದ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದುಷ್ಕರ್ಮಿಗಳು ನಂತರ ಪರಾರಿಯಾಗಿರುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮನೆಯಲ್ಲಿ ಏಕಾಂಗಿಯಾಗಿ ನೆಲೆಸಿದ್ದ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದುಷ್ಕರ್ಮಿಗಳು ನಂತರ ಪರಾರಿಯಾಗಿರುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಯಚೂರು ಮೂಲದ ಅಂಬಿಕಾ (35) ಹತ್ಯೆಯಾಗಿರುವ ಮಹಿಳೆಯಾಗಿದ್ದಾರೆ. ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿರುವ ಮನೆಯೊಂದರಲ್ಲಿ ಇವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅಂಬಿಕಾ ಅವರು, ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಇವರ ಇಬ್ಬರು ಮಕ್ಕಳು ಹಾಸ್ಟೆಲ್‌ನಲ್ಲಿದ್ದಾರೆ.

ಮನೆಯಿಂದ ದುರ್ವಾಸಣೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮನೆಯ ಬಾಗಿಲು ತೆಗೆದು ಒಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಹತ್ಯೆ ಮಾಡಿದ ನಂತರ ದುಷ್ಕರ್ಮಿಗಳು ಹೊರಗಿನಿಂದ ಬಾಗಿಲು ಹಾಕಿ ಪರಾರಿಯಾಗಿದ್ದಾರೆ. 2-3 ದಿನಗಳ ಹಿಂದೆ ಕೊಲೆ ನಡೆದಿದ್ದು, ದೇಹದಲ್ಲಿ ಅನೇಕ ಇರಿತದ ಗಾಯಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಮೇಲ್ನೋಟಕ್ಕೆ ಸಂತ್ರಸ್ತೆಗೆ ತಿಳಿದಿರುವ ಯಾರೋ ವ್ಯಕ್ತಿಗಳು ಕೊಲೆಯ ಹಿಂದೆ ಇರುವುದಾಗಿ ಶಂಕೆಗಳು ವ್ಯಕ್ತವಾಗಿವೆ. ಆರೋಪಿಗಳ ಬಂಧಿಸಿದ ನಂತರವಷ್ಟೇ ಕೊಲೆಯ ಹಿಂದಿನ ಕಾರಣಗಳು ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.