ರಾಜ್ಯ

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ

ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ
ಶಿಕ್ಷಣ ಇಲಾಖೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಹೌದು.. ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ ಗೊಳಿಸಿ ಸುತ್ತೋಲೆ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಏಪ್ರಿಲ್ ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಲಾಗಿದ್ದು, ಜೊತೆಗೆ ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ತಿಳಿಸಲಾಗಿದೆ.

ಡೊನೇಷನ್ ಕೇಳುವಂತಿಲ್ಲ.. ಪೋಷಕರಿಗೆ ಪ್ರವೇಶ ಪರೀಕ್ಷೆಯೂ ಇಲ್ಲ!!
ಅಂತೆಯೇ ಸಿಬಿಎಸ್‌ಸಿ, ಐ ಸಿ ಎಸ್ ಸಿ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಡೊನೇಷನ್ ಪಡೆಯಬಾರದು ಎಂದು ತಿಳಿಸಲಾಗಿದೆ. ಅಂತೆಯೇ ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸೂಚಿಸಲಾಗಿದ್ದು, ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಇದು ಪುನರಾವರ್ತನೆ ಆದರೆ ದಿನಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.