ರಾಜ್ಯ

ಪ್ರಧಾನಿ ಮೋದಿ ರೋಡ್ ಶೋಗೆ ರೂ.3 ಕೋಟಿ ಖರ್ಚು: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್‌ಶೋಗಾಗಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದೆ.

ಪ್ರಧಾನಿ ಮೋದಿ ರೋಡ್ ಶೋಗೆ ರೂ.3 ಕೋಟಿ ಖರ್ಚು: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್‌ಶೋಗಾಗಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದೆ.

ಮಾಗಡಿ ರಸ್ತೆಯಲ್ಲಿ ಪ್ರಧಾನಿ ಮೋದಿ ಅವರು ನಡೆಸಿದ ರೋಡ್ ಶೋಗೆ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಬಳಸಲಾಗಿದೆ, ಇದಕ್ಕೆ ಯಾವುದೇ ಅನುಮತಿಯನ್ನೂ ಪಡೆದಿಲ್ಲ. ಇದು ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮಕ್ಕೇ ಆದರೂ ಚುನಾವಣಾ ಆಯೋಗದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ಬಿಜೆಪಿ ಮೋದಿಯವರ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಿದೆ.

ಇದಲ್ಲದೆ, ಚುನಾವಣಾ ಪ್ರಚಾರಕ್ಕಾಗಿ ಪಕ್ಷವು ಸುಮಾರು 3 ಕೋಟಿ ರೂ ಖರ್ಚು ಮಾಡಿದ್ದು, ಇದಕ್ಕಾಗಿ ಬಿಬಿಎಂಪಿ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ನಿಗದಿಪಡಿಸಿದ ಶುಲ್ಕವನ್ನೂ ಬಿಜೆಪಿ ಪಾವತಿಸಿಲ್ಲ ಎಂದು ದೂರಿನಲ್ಲಿ ತಿಳಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.