ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ 125 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ
ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ವಿತರಿಸಲಾದ ಶೂನ್ಯ ಟಿಕೆಟ್ ದರ 687,49,57,753 ರೂ. ಆಗಿದ್ದು,...

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ವಿತರಿಸಲಾದ ಶೂನ್ಯ ಟಿಕೆಟ್ ದರ 687,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲು ಅಥವಾ ಮೊದಲ ಕಂತನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಮೊದಲ ಕಂತಿನ ಹಣವಾಗಿ ಒಟ್ಟು 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಕೆಎಸ್‌ಆರ್‌ಟಿಸಿಗೆ 47.15 ಕೋಟಿ ರೂಪಾಯಿ, ಬಿಎಂಟಿಸಿ 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ(NWRTC)ಗೆ 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ(KKRTC) 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.
ಕಳೆದ ಜೂನ್ 11ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈವರೆಗೆ ನಾಲ್ಕು ನಿಗಮಗಳಲ್ಲಿ 29,32,49,151 ಮಹಿಳೆಯರು ಪ್ರಯಾಣಿಸಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನಾಲ್ಕು ನಿಗಮಗಳು ಒಟ್ಟು 687,49,57,753 ರೂ., ಮೌಲ್ಯದ ಶೂನ್ಯ ಟಿಕೆಟ್ ವಿತರಣೆ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


