ರಾಜ್ಯ

ರಾಜ್ಯದಲ್ಲಿ ಹೂಡಿಕೆ ಕುರಿತು ಫಾಕ್ಸ್‌ಕಾನ್ ಜೊತೆಗೆ ಕರ್ನಾಟಕ ಸರ್ಕಾರ ನಡೆಸಿದ ಚರ್ಚೆ 'ಫಲಪ್ರದ': ಸಚಿವ ಎಂಬಿ ಪಾಟೀಲ್

ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಉತ್ಸುಕವಾಗಿರುವ ಉದ್ದೇಶಿತ ಯೋಜನೆಗಳ ಬಗ್ಗೆ ಆಪಲ್‌ನ ಪ್ರಮುಖ ಐಫೋನ್ ಅಸೆಂಬ್ಲರ್ ಆಗಿರುವ ತೈವಾನ್‌ನ ಫಾಕ್ಸ್‌ಕಾನ್‌ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರವು 'ಫಲಪ್ರದ' ಚರ್ಚೆ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಕುರಿತು ಫಾಕ್ಸ್‌ಕಾನ್ ಜೊತೆಗೆ ಕರ್ನಾಟಕ ಸರ್ಕಾರ ನಡೆಸಿದ ಚರ್ಚೆ 'ಫಲಪ್ರದ': ಸಚಿವ ಎಂಬಿ ಪಾಟೀಲ್
ಸಚಿವ ಎಂಬಿ ಪಾಟೀಲ್
Published On :

ಬೆಂಗಳೂರು: ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಉತ್ಸುಕವಾಗಿರುವ ಉದ್ದೇಶಿತ ಯೋಜನೆಗಳ ಬಗ್ಗೆ ಆಪಲ್‌ನ ಪ್ರಮುಖ ಐಫೋನ್ ಅಸೆಂಬ್ಲರ್ ಆಗಿರುವ ತೈವಾನ್‌ನ ಫಾಕ್ಸ್‌ಕಾನ್‌ ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರವು 'ಫಲಪ್ರದ' ಚರ್ಚೆ ನಡೆಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.

ಸಭೆಯಲ್ಲಿ ಎಂಬಿ ಪಾಟೀಲ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಚೆನ್ನೈನ ಖಾಸಗಿ ಹೋಟೆಲ್‌ನಲ್ಲಿ ನಡೆದ ಚರ್ಚೆಯಲ್ಲಿ ಉಪಸ್ಥಿತರಿದ್ದರು ಎಂದು ಕೈಗಾರಿಕಾ ಸಚಿವರ ಕಚೇರಿ ಹೇಳಿಕೆ ತಿಳಿಸಿದೆ.

ಸಚಿವ ಎಂಬಿ ಪಾಟೀಲ್ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಹೂಡಿಕೆ ನೀತಿಗಳು ಕೈಗಾರಿಕೆಗಳ ಬೆಳವಣಿಗೆಗೆ ಅನುಕೂಲವಾಗುವ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಸಹಕಾರಿಯಾಗಿದೆ ಎಂದರು.

ಚರ್ಚೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಚಿವರು, ಕಂಪನಿ ಅಧ್ಯಕ್ಷರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.