ಭಯೋತ್ಪಾದಕ ಕೃತ್ಯಕ್ಕೆ ಸಂಚು: ಶಂಕಿತ ಉಗ್ರರಿಗೆ ಗ್ರೆನೇಡ್ ಬಳಕೆಯೇ ತಿಳಿದಿರಲಿಲ್ಲ; ಪೊಲೀಸರು
ವಶಕ್ಕೆ ಪಡೆಯಲಾಗಿದ್ದ ಲೈವ್ ಹ್ಯಾಂಡ್ ಗ್ರೆನೇಡ್ ಗಳು ವಿದೇಶಿ ನಿರ್ಮಿವಾಗಿದ್ದು, ಅವುಗಳ ಬಳಕೆ ಹೇಗೆ ಎಂಬುದು ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರಿಗೆ ತಿಳಿದೇ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ವಶಕ್ಕೆ ಪಡೆಯಲಾಗಿದ್ದ ಲೈವ್ ಹ್ಯಾಂಡ್ ಗ್ರೆನೇಡ್ ಗಳು ವಿದೇಶಿ ನಿರ್ಮಿವಾಗಿದ್ದು, ಅವುಗಳ ಬಳಕೆ ಹೇಗೆ ಎಂಬುದು ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರಿಗೆ ತಿಳಿದೇ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಗ್ರೆನೇಡ್ ಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಕಷ್ಟ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಕೊಡಿಗೇಹಳ್ಳಿಯ ಮನೆಯೊಂದರಲ್ಲಿ ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಗ್ರೆನೇಡ್‌ಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗ್ರೆನೇಡ್‌ಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಕಷ್ಟ. ಆದರೆ, ಈ ಗ್ರೆನೇಡ್‌ಗಳು ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿವೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದಲ್ಲದೆ, ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರಲ್ಲಿ (ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್) ಯಾರೊಬ್ಬರಿಗೂ ಗ್ರೆನೇಡ್ ಅನ್ನು ಹೇಗೆ ಬಳಸಬೇಕೆಂದು ತಿಳಿದಿರಲಿಲ್ಲ ಎಂದು ತಿಳಿಸಿದ್ದಾರೆ
ಹ್ಯಾಂಡ್ಲರ್‌ಗಳ ಆಜ್ಞೆಯ ಮೇರೆಗೆ ಗ್ರೆನೇಡ್‌ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು, ಆದರೆ ಅವುಗಳನ್ನು ಹೇಗೆ ಬಳಸಬೇಕು ಅಥವಾ ಇತರರು ಅವರಿಂದ ಗ್ರೆನೇಡ್‌ಗಳನ್ನು ಸ್ವೀಕರಿಸುತ್ತಾರೆಯೇ ಎಂಬ ಬಗ್ಗೆ ಯಾವುದೇ ಸುಳಿವೂ ಅವರಿಗಿರಲಿಲ್ಲ. ಹ್ಯಾಂಡ್ಲರ್‌ಗಳ ಆದೇಶಕ್ಕಾಗಿ ಕಾಯುತ್ತಿದ್ದರು. ವಿದೇಶದಿಂದ ಹಣವನ್ನೂ ಪಡೆದುಕೊಂಡಿದ್ದರು. ಶಂಕಿತರ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್ ಮೂಲಕ ಹಣ ವರ್ಗಾಯಿಸಲಾಗಿದೆ. ಐವರೂ ಕೆಲವು ಲಕ್ಷ ರೂಪಾಯಿಗಳನ್ನು ಸ್ವೀಕರಿಸಿದ್ದಾರೆಂದು ಹೇಳಿದ್ದಾರೆ.
ಈ ನಡುವೆ ತಲೆಮರೆಸಿಕೊಂಡಿರುವ ಪ್ರಕರಣದ ಆರೋಪಿ ನಂ.2 ಜುನೈದ್ ಅಹ್ಮದ್'ನ್ನು ಪತ್ತೆ ಮಾಡಲು ತನಿಖೆ ಮುಂದುವರೆದಿದೆ. ಅಲ್ಲದೆ, ಪ್ರಕರಣದ ಪ್ರಮುಖ ಆರೋಪಿ ಮತ್ತು ಪ್ರಸ್ತುತ ಪೊಲೀಸ್ ವಶದಲ್ಲಿರುವ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ನಜೀರ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿದುಬಂದಿದೆ.
2008 ರ ಬೆಂಗಳೂರಿನಲ್ಲಿ ನಡೆದ ಸರಣಿ ಸ್ಫೋಟದ ಆರೋಪಿ ನಜೀರ್ ಈ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದಾನೆ. "ಈ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂದು ತಿಳಿಯಲು ನಾವು ನಜೀರ್‌ನನ್ನು ವಿಚಾರಣೆ ನಡೆಸಲಾಗುತ್ತಿದೆ. ಆದರೆ. ಆತ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


