ರಾಜ್ಯ

ಬೆಂಗಳೂರು: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.

ಬೆಂಗಳೂರು: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ
ವೀರಾರ್ಜುನ ವಿಜಯ್ ಹಾಗೂ ಅವರ ಪತ್ನಿ
Published On :

ಬೆಂಗಳೂರು: ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ರಾತ್ರಿ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. 

ಆಂಧ್ರ ಪ್ರದೇಶ ಮೂಲದ ಟೆಕ್ಕಿ ವೀರಾರ್ಜುನ ವಿಜಯ್(31) ಅವರು ತಮ್ಮ ಪತ್ನಿ ಹೇಮಾವತಿ(29) ಮತ್ತು ಒಂದೂವರೆ ವರ್ಷ ಮತ್ತು 8 ತಿಂಗಳ ಎರಡು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್​​, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.