ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಮೃತರನ್ನು ಜಾರ್ಖಂಡ್ ಮೂಲದ ಚಿನ್ನಯ್ಯನಪಾಳ್ಯದ ನಿವಾಸಿ ಆದಿತ್ಯ ಲೂಕ್ ಕುಜೂರ್ (27) ಎಂದು ಗುರುತಿಸಲಾಗಿದೆ. ಯುವಕ ಕಳೆದ 2 ವರ್ಷಗಳಿಂದ ಖಾಸಗಿ ಸೆಕ್ಯುರಿಟಿ ಏಜೆನ್ಸಿಯಲ್ಲಿ ಉಸ್ತುವಾರಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ.
ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿರುವಾಗ ಹೆಲ್ಮೆಟ್ ಇಲ್ಲದೆ ಅತಿವೇಗವಾಗಿ ತನ್ನ ಬೈಕ್ ನಲ್ಲಿ ತೆರಳಿದ್ದಾನೆ. ಈ ವೇಳೆ ಇಂದಿರಾ ನಗರದ 100 ಫೀಟ್ ರೋಡ್ ನಲ್ಲಿ ನಿಯಂತ್ರಣ ತಪ್ಪಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಪರಿಣಾಮ, ಯುವಕ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆಂದು ತಿಳಿದುಬಂದಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


