ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಪೇಟ ತೊಡಿಸಿ, ಅಂಬಾರಿ ಪ್ರತಿಕೃತಿ ಕೊಟ್ಟು ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು.
ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.
ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


