ಬಿಬಿಎಂಪಿ ವಾರ್ಡ್ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸಲು ಸಜ್ಜಾಗಿದ್ದು, ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸಲು ಸಜ್ಜಾಗಿದ್ದು, ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿ ಈ ಹಿಂದೆ ಬಿಜೆಪಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.
ಬಿಬಿಎಂಪಿ ಈ ಹಿಂದೆ 198 ವಾರ್ಡುಗಳನ್ನು ಹೊಂದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಾರ್ಡುಗಳನ್ನು ಪುನರ್ ವಿಂಗಡಣೆ ಮಾಡಿ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರದ ಅಧಿಸೂಚನೆ ಹಿಂಪಡೆಯುವ ಮೂಲಕ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧವಾಗಿದೆ. ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ ಕೋರ್ಟ್ ಆದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಮಾಡಿದ ವಾರ್ಡ್ ವಿಂಗಡನೆಗೆ ಸಂಬಂಧಿಸಿದಂತೆ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹಳೆ ವಾರ್ಡ್ ವಿಂಗಡನೆ ರದ್ದು ಮಾಡಿ ಮತ್ತೆ ಹೊಸದಾಗಿ ವಾರ್ಡ್ಗಳನ್ನು ವಿಂಗಡನೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೆ 12 ವಾರಗಳ ಒಳಗಾಗಿ ವಾರ್ಡ್ ವಿಂಗಡನೆ ಮಾಡುವಂತೆ ಆದೇಶ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


