ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡಿ: ಬಿಬಿಎಂಪಿಗೆ ಡಿಕೆಶಿ ಸೂಚನೆ
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು, ಬಿಬಿಎಂಪಿ ಮೇಲಿನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದು, ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು, ಬಿಬಿಎಂಪಿ ಮೇಲಿನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದು, ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.
ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ.
2019 ರಿಂದ 2023 ರವರೆಗೆ ಬಿಬಿಎಂಪಿಯಲ್ಲಿ ನಡೆದ ಟೆಂಡರ್‌ಗಳು, ಕಾಮಗಾರಿಗಳು, ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


