ರಾಜ್ಯ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು
ಮೃತ ದಂಪತಿಗಳು.
Published On :

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಅಹಮದ್ ಮಕ್ಬುಲ್ಸಾಬ್ ಸನದಿ ಅಲಿಯಾಸ್ ದೇಸಾಯಿ (32) ಅವರ ಪತ್ನಿ ಲತಾ ಅಮಿತ್ ದೇಸಾಯಿ (26) ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್​ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.

ದಂಪತಿಗಳು ಹೆಣ್ಣುಮಗುವನ್ನು ಅಗಲಿದ್ದಾರೆ. ದಂಪತಿಗಳು ತಮ್ಮ ಜಮೀನಿನಲ್ಲಿ ಗೆಣಸು ಬೆಳೆದಿದ್ದು, ಭಾನುವಾರ ಬೆಳಿಗ್ಗೆ ಕೀಟನಾಶ ಸಿಂಪಡಿಸಲು ಮುಂದಾಗಿದ್ದರು. ಈ ವೇಳೆ ಹೈವೋಲ್ಟೇಜ್ ತಂತಿ ತುಂಡಾಗಿ ನಿಸಾರ್ ಮೇಲೆ ಬಿದ್ದಿದ್ದು, ನಿಸಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಆತನನ್ನು ರಕ್ಷಿಸಲು ಯತ್ನಿಸಿದ ಪತ್ನಿ ಲತಾ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಜಮೀನಿನಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿಗಳು ಹಳೆಯದಾಗಿದ್ದು, ತುಕ್ಕು ಹಿಡಿದಿದ್ದವು. ಇವುಗಳನ್ನು ಬದಲಾಯಿಸುವಂತೆ ಅನೇಕ ಬಾರಿ ಗ್ರಾಮಸ್ಥರು ಒತ್ತಾಯಿಸಿದ್ದರು. ಆದರೆ, ಹೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಅಲ್ಲದೆ, ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.