ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ
ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕರೊಬ್ಬರು ಶನಿವಾರ ರಾತ್ರಿ ಜಂಕಲ್ ಗ್ರಾಮದ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕರೊಬ್ಬರು ಶನಿವಾರ ರಾತ್ರಿ ಜಂಕಲ್ ಗ್ರಾಮದ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಸಾವಿಗೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿ ಹಾಗೂ ಕೆಲ ಸದಸ್ಯರು ಕಾರಣ ಎಂದು ತಿಪ್ಪೇಸ್ವಾಮಿ ಅವರು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.
ಆದರೆ, ತಿಪ್ಪೇಸ್ವಾಮಿ ಅವರ ಪುತ್ರ ರಾಜಶೇಖರ್, ಹೊಸದುರ್ಗ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ, ಶಾಸಕ ಹಾಗೂ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ದೂರಿಲ್ಲ. ಬದಲಾಗಿ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಮಾತ್ರ ತಂದೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ತನ್ನ ಸಾವಿಗೆ ಚಂದ್ರಪ್ಪ, ರವಿ, ಮೋಹನ್, ಮೂರ್ತಿ, ಉಗ್ರಪ್ಪ, ಲವ ಮತ್ತು ರಾಜಪ್ಪ ಕಾರಣ ಎಂದು ತಿಪ್ಪೇಸ್ವಾಮಿ ತಮ್ಮ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಆದರೆ, ಚಂದ್ರಪ್ಪ ಅವರು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದು, ಹಿರಿಯ ಶಾಸಕರಾಗಿರುವ ನಾನು ಗೆಜೆಟೆಡ್ ಅಧಿಕಾರಿಗಳೊಂದಿಗೆ ಮಾತ್ರ ಸಂವಹನ ನಡೆಸುತ್ತೇನೆಯೇ ಹೊರತು ಪಂಚಾಯಿತಿ ಮಟ್ಟದ ಅಧಿಕಾರಿಗಳೊಂದಿಗೆ ಅಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


