ಅಂದು ಬಂಗಾರಪ್ಪ, ಜಾಲಪ್ಪ; ಇಂದು ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು: ಪ್ರಣವಾನಂದ ಸ್ವಾಮೀಜಿ
ಈಡಿಗ ಸಮುದಾಯದ ಜನಾರ್ದನ ಪೂಜಾರಿ, ಬಂಗಾರಪ್ಪ, ಆರ್.ಎಲ್. ಜಾಲಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ ರೀತಿಯಲ್ಲಿಯೇ ಈಗ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಗಿಸಲು ಕಾಂಗ್ರೆಸ್‌ನಲ್ಲಿ ಹುನ್ನಾರ ನಡೆಯುತ್ತಿದೆ

ಕೊಪ್ಪಳ: ಈಡಿಗ ಸಮುದಾಯದ ಜನಾರ್ದನ ಪೂಜಾರಿ, ಬಂಗಾರಪ್ಪ, ಆರ್.ಎಲ್. ಜಾಲಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ ರೀತಿಯಲ್ಲಿಯೇ ಈಗ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಗಿಸಲು ಕಾಂಗ್ರೆಸ್‌ನಲ್ಲಿ ಹುನ್ನಾರ ನಡೆಯುತ್ತಿದೆ ಎಂದು ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಯಾವುದೇ ಕಪ್ಪುಚುಕ್ಕೆಗಳಿಲ್ಲ. ಬೇರೆ ಪಕ್ಷದಿಂದ ವಲಸೆಯೂ ಬಂದಿಲ್ಲ. ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರೂ ಸಚಿವ ಸ್ಥಾನ ನೀಡಿಲ್ಲ. ಇದರಿಂದ ಸಮುದಾಯಕ್ಕೆ ಬೇಸರವಾಗಿದೆ’ ಎಂದರು.
ಈ ಕುರಿತು ನಮ್ಮ ಸಮಾಜದ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯದಾದ್ಯಂತ ಸಭೆಗಳನ್ನು ನಡೆಸಲಾಗುತ್ತಿದೆ. ಈಡಿಗ ಸಮುದಾಯದ ಆರ್ಥಿಕ ಕುಲಕಸುಬಿಗೆ ಪೆಟ್ಟು ನೀಡುವ ಉದ್ದೇಶದಿಂದಾಗಿಯೇ 2004ರಲ್ಲಿ ಸೇಂದಿ, 2007ರಲ್ಲಿ ಸಾರಾಯಿ ಬಂದ್ ಮಾಡಿಸಿ ಈಗ ಸಮುದಾಯದ ನಾಯಕರಿಗೆ ರಾಜಕೀಯ ಆಸ್ತಿತ್ವ ಇಲ್ಲದಂತೆ ಮಾಡಲಾಗುತ್ತಿದೆ ಎಂದು ದೂರಿದರು.
ಹರಿಪ್ರಸಾದ್ ಅವರಿಗೆ ಸಚಿವಸ್ಥಾನ ನೀಡುವಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಿಫಾರಸು ಮಾಡಿದ್ದರು. ಆದರೆ, ಶಿಫಾರಸು ಪತ್ರ ರಾಜ್ಯ ತಲುಪುವುದರ ಒಳಗೆ ಹರಿಪ್ರಸಾದ್ ಹೆಸರು ನಾಪತ್ತೆಯಾಗಿದ್ದು, ಚುನಾವಣಾ ಸಮಯದಲ್ಲಿ ಪಕ್ಷಕ್ಕೆ ನಿಷ್ಠರಾಗಿದ್ದರೂ ಸ್ಥಾನಮಾನ ನೀಡದೆ ಅನ್ಯಾಯ ಮಾಡಲಾಗಿದೆ’ ಎಂದರು.
ಇದೆಲ್ಲವನ್ನು ವಿರೋಧಿಸಿ ಹಾಗೂ ನಮ್ಮ ಸಮುದಾಯದ ನಾಯಕರಿಗೆ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಸೆಪ್ಟೆಂಬರ್ 9ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಒಕ್ಕೂಟದ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಈಗಾಗಲೇ ಈಡಿಗ ಸಮುದಾಯಕ್ಕೆ ಸಾಕಷ್ಟು ಅನ್ಯಾಯ ಮಾಡಲಾಗಿದೆ. ಈ ಬಜೆಟ್‍ನಲ್ಲಿ ಈಡಿಗ ಸಮುದಾಯದ ನಿಗಮ ಬಿಟ್ಟು ಉಳಿದ ನಿಗಮಗಳಿಗೆ ಅನುದಾನ ನೀಡಲಾಗಿದೆ. ಈಡಿಗ ನಿಗಮಕ್ಕೆ ನಯಾ ಪೈಸೆ ಅನುದಾನ ಕೊಡದೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


