ಭೂಮಿ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು: ಡಿಕೆ ಶಿವಕುಮಾರ್
ಭೂಮಿ ಕಳೆದುಕೊಂಡ ರೈತರಿಗೆ ಉತ್ತಮ ಬೆಲೆ ಸಿಗಬೇಕು. ಶಿವರಾಮ ಕಾರಂತ ಬಡಾವಣೆಯ ಬಳಿಯೇ ಐಟಿ ಹಬ್ ಅಭಿವೃದ್ಧಿಪಡಿಸಲು ಜಾಗ ಮೀಸಲಿಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಭೂಮಿ ಕಳೆದುಕೊಂಡ ರೈತರಿಗೆ ಉತ್ತಮ ಬೆಲೆ ಸಿಗಬೇಕು. ಶಿವರಾಮ ಕಾರಂತ ಬಡಾವಣೆಯ ಬಳಿಯೇ ಐಟಿ ಹಬ್ ಅಭಿವೃದ್ಧಿಪಡಿಸಲು ಜಾಗ ಮೀಸಲಿಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದರು.
ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯ ಪ್ರದೇಶದಲ್ಲಿ ಶನಿವಾರ ವೀಕ್ಷಣೆ ನಡೆಸಿದ ನಂತರ ಉಪಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಡಾವಣೆಗೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿಯ ಜತೆಗೂ ಚರ್ಚಿಸಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ ಎಂದು ಹೇಳಿದರು.
‘ಕಂಠೀರವ ಕ್ರೀಡಾಂಗಣದ ಮಾದರಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ ಜಾಗ ನಿಗದಿಪಡಿಸಿದ್ದಾರೆ. ನಿಗದಿಪಡಿಸಿರುವ ಜಾಗದ ಬಗ್ಗೆ ನನಗೆ ಸಮಾಧಾನ ಇಲ್ಲ. 45 ಮೀಟರ್ ರಸ್ತೆ ಪಕ್ಕದಲ್ಲಿ ಉದ್ಯಾನಕ್ಕೆ ಸ್ಥಳ ಮೀಸಲಿಡಲಾಗಿದೆ. ಅಲ್ಲಿ ಕ್ರೀಡಾಂಗಣ ಇರಬೇಕು. ಮುಂದೆ ಮೆಟ್ರೊ ಬಂದರೆ ಅದರ ಹತ್ತಿರದಲ್ಲಿ ಕ್ರೀಡಾಂಗಣ ಇರಬೇಕು. ಕ್ರೀಡಾಂಗಣಕ್ಕೆ 25-45 ಎಕರೆ ಭೂಮಿ ಮೀಸಲಿಡಲಾಗಿದೆ’ ಎಂದು ಮಾಹಿತಿ ನೀಡಿದರು.
45 ಮೀಟರ್ ರಸ್ತೆ ಸಮೀಪ ಯಾರಿಗೂ ನಿವೇಶನ ನೇರ ಹಂಚಿಕೆ ಮಾಡಬಾರದು. ಇಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಭೂಮಿ ಬಳಕೆ ಆಗಬೇಕು. ಇದರಿಂದ ಬಿಡಿಎ ಹಾಗೂ ಸರ್ಕಾರಕ್ಕೆ ಲಾಭವಾಗುವಂತೆ ಇರಬೇಕು ಎಂದು ತಿಳಿಸಿದರು.
ನಿವೇಶನ ಹಂಚಿಕೆಗೆ ಮೊದಲ ಆದ್ಯತೆ ನೀಡಲಾಗುವುದು. ಆ ಬಳಿಕ ಉಳಿದ ಕೆಲಸ ಜಾರಿ ಆಗಬೇಕು. ಸದ್ಯಕ್ಕೆ 2,500 ಎಕರೆ ಜಾಗದಲ್ಲಿ ಕಾಮಗಾರಿ ನಡೆಯುತ್ತಿದೆ. ಉಳಿದ ಜಾಗದ ವಿಚಾರವಾಗಿ ಕಾನೂನು ತೊಡಕಿನ ಬಗ್ಗೆ ಚರ್ಚಿಸಲಾಗುತ್ತಿದೆ’ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


