ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಇಂದಿನಿಂದ ತನಿಖೆ ಆರಂಭ- ಮುಖ್ಯ ಎಂಜಿನಿಯರ್ ಪ್ರಹ್ಲಾದ್

ಪಾಲಿಕೆ ಕೇಂದ್ರ ಕಚೇರಿಯ ಕ್ವಾಲಿಟಿ ಕಂಟ್ರೋಲ್ ಲ್ಯಾಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರದಿಂದ ತನಿಖೆ ಆರಂಬವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯೋಜಿತ ಅಧಿಕಾರಿ ಬಿ.ಎಸ್.ಪ್ರಹ್ಲಾದ್ ಅವರು ಬುಧವಾರ ಹೇಳಿದ್ದಾರೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಇಂದಿನಿಂದ ತನಿಖೆ ಆರಂಭ- ಮುಖ್ಯ ಎಂಜಿನಿಯರ್ ಪ್ರಹ್ಲಾದ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಪಾಲಿಕೆ ಕೇಂದ್ರ ಕಚೇರಿಯ ಕ್ವಾಲಿಟಿ ಕಂಟ್ರೋಲ್ ಲ್ಯಾಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರದಿಂದ ತನಿಖೆ ಆರಂಬವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯೋಜಿತ ಅಧಿಕಾರಿ ಬಿ.ಎಸ್.ಪ್ರಹ್ಲಾದ್ ಅವರು ಬುಧವಾರ ಹೇಳಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಅವಘಡಕ್ಕೆ ಕಾರಣ ತಿಳಿಯಲು ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಲು ಸೀಲ್ ಆಗಿದ್ದ ಲ್ಯಾಬ್'ನ್ನು ಪೊಲೀಸ್ ಉಪಸ್ಥಿತಿಯಲ್ಲಿ ತೆರೆಯಲಾಗಿದೆ. ಗುರುವಾರದಿಂದ ತನಿಖೆ ಆರಂಭವಾಗಲಿದೆ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ತಾಂತ್ರಿಕ ಲೋಪದೋಷಗಳನ್ನು ಪರಿಶೀಲಿಸಿ ಆಗಸ್ಟ್ 30 ರೊಳಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ದಾಖಲೆಗಳ ವಿಚಾರವಾಗಿ ಮಾತನಾಡಿ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಲಾಗುವುದು, ಪೊಲೀಸರಿಗೂ ದಾಖಲೆಗಳನ್ನು ನೀಡಲಾಗುವುದು ಎಂದರು.

ಆಂತರಿಕ ವರದಿ ಸಿದ್ಧಪಡಿಸುವ ತಂಡದಲ್ಲಿ ಇಬ್ಬರು ಬಿಬಿಎಂಪಿ ಎಂಜಿನಿಯರ್‌ಗಳು ಮತ್ತು ಖಾಸಗಿ ಪ್ರಯೋಗಾಲಯದ ನಿರ್ವಹಣಾ ತಜ್ಞರೂ ಇರಲಿದ್ದಾರೆ. ಪೊಲೀಸರು ಕೂಡ ಘಟನೆಯ ತನಿಖೆಯನ್ನು ಆರಂಭಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯಲಾಗುತ್ತಿದ್ದು, ವರದಿ ಸಿಕ್ಕ ಕೂಡಲೇ ತನಿಖೆ ಪ್ರಾರಂಬವಾಗಲಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎನ್ ಸತೀಶ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.