ರಾಜ್ಯ

ಚಂದ್ರಯಾನ-3 ಕುರಿತು ಅಪಹಾಸ್ಯ: ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಚಂದ್ರಯಾನ-3 ಕುರಿತು ಅಪಹಾಸ್ಯ ರೀತಿಯ ಫೋಟೋ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದು, ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚಂದ್ರಯಾನ-3 ಕುರಿತು ಅಪಹಾಸ್ಯ: ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು
ಪ್ರಕಾಶ್ ರೈ ಹಂಚಿಕೊಂಡಿದ್ದ ಫೋಟೋ
Published On :

ಬೆಂಗಳೂರು: ಚಂದ್ರಯಾನ-3 ಕುರಿತು ಅಪಹಾಸ್ಯ ರೀತಿಯ ಫೋಟೋ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದು, ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚಂದ್ರಯಾನ-3 ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಆಗಸ್ಟ್ 23 ರ ಸಂಜೆ 06:04ಕ್ಕೆ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್‌ ಲ್ಯಾಂಡ್ ಆಗಲಿದ್ದು, ಇದರ ಯಶಸ್ಸಿಗಾಗಿ ದೇಶದ ವಿವಿಧ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರ ಕೂಡಾ ನಡೆಯುತ್ತಿದೆ. ಹೀಗಿರುವಾಗಲೇ, ಚಂದ್ರಯಾನ-3 ಬಗ್ಗೆ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್‌ ಸೋಷಿಯಲ್‌ ಮೀಡಿಯಾದಲ್ಲಿ ವಿವಾದದ ಕಿಡಿ ಹೊತ್ತಿಸಿದೆ.

"ಬ್ರೇಕಿಂಗ್ ನ್ಯೂಸ್: ಚಂದ್ರನ ಅಂಗಳದಿಂದ #ವಿಕ್ರಮ್‌ಲ್ಯಾಂಡರ್‌ ನಿಂದ ಬಂದ ಮೊದಲ ಫೋಟೋ.. ವಾವ್"  ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ವ್ಯಕ್ತಿಯೊಬ್ಬರು ಎರಡು ಮಗ್‌ಗಳ ನಡುವೆ ಚಹಾವನ್ನು ಸುರಿಯುವ ವ್ಯಂಗ್ಯಚಿತ್ರ ಹಂಚಿಕೊಂಡಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ನೆಟ್ಟಿಗರು ಪ್ರಕಾಶ್ ರೈ ವಿರುದ್ಧ ಮುಗಿ ಬಿದ್ದಿದ್ದಾರೆ. ವಿವಾದಿತ ಟ್ವೀಟ್ ಮೂಲಕ ದೇಶಕ್ಕೆ ಅಪಮಾನ ಮಾಡುತ್ತಿರುವ ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.