ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಹೃದಯಾಘಾತದಿಂದ ಪತಿ ಸಾವು
ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದ ಬಳಿಕ ಮನನೊಂದ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ.

ಮೈಸೂರು: ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದ ಬಳಿಕ ಮನನೊಂದ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ.
ಇತ್ತ ಪತಿ ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದ ಪತಿಗೆ ಜೈಲಿನಲ್ಲೇ ಹೃದಯಾಘಾತವಾಗಿದ್ದು, ಅವರೂ ಕೂಡ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಇಂದ್ರಾಣಿ (35) ಎಂದು ಗುರ್ತಿಸಲಾಗಿದೆ. ಮೈಸೂರಿನ ವಿದ್ಯಾನಗರದಲ್ಲಿ ಬಾಲರಾಜ್ ಎಂಬಾತನ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಸಾಮ್ರಾಟ್ ಮತ್ತು ಆತನ ಪುತ್ರ ತೇಜಸ್ನನ್ನು ಬಂಧನಕ್ಕೊಳಪಡಿಸಿದ್ದರು. ಇದರಿಂದ ಖಿನ್ನತೆಗೊಳಗಾಗಿದ್ದ ಇಂದ್ರಾಣಿಯವರು ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ನಡುವೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಾಮ್ರಾಟ್ ಅವರಿಗೆ ಪತ್ನಿಯ ಆತ್ಮಹತ್ಯೆಯ ವಿಚಾರ ತಿಳಿದಿದ್ದು, ಈ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


