ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪನೆ: ಕಾನೂನಿನ ವಿರುದ್ಧ ಹೋಗುವುದಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ
ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ...

ಬೆಂಗಳೂರು: ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಉತ್ತರಪ್ರದೇಶ ಸರ್ಕಾರವಲ್ಲ. ನಮ್ಮ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ಸರ್ಕಾರದ ನಿರ್ಣಯ ಕುರಿತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)ಗೆ ಪತ್ರ ಬರೆಯುತ್ತೇನೆಂದು ಹೇಳಿದ್ದಾರೆ.
ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ), ಆನ್ಲೈನ್ ನಲ್ಲಿ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಇರುವುದು ನಿಜ. ಆದರೆ ಅಂತಹ ವಿಷಯವನ್ನು ಗುರುತಿಸುವ ಹಾಗೂ ತೆಗೆದುಹಾಕುವ ಪ್ರಯತ್ನಗಳನ್ನು ಸರಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲದಿದ್ದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ. ಯಾವುದೇ ಮೇಲ್ವಿಚಾರಣಾ ಚೌಕಟ್ಟು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು, ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹಾಳು ಮಾಡಬಾರದು ಎಂದು ಹೇಳಿತ್ತು. ಅಲ್ಲದೆ, ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಹಾಗೂ ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸಲು ಸರ್ಕಾರಕ್ಕೆ ಒತ್ತಾಯಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


