ಲಂಚ ಪ್ರಕರಣ: ಪೊಲೀಸ್ ಅಧಿಕಾರಿ ಖುಲಾಸೆಗೊಳಿಸಿದ ನ್ಯಾಯಾಲಯ
ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2019ರ ಫೆ.18ರಂದು ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30 ಲಕ್ಷ ರೂ. ದಂಡವನ್ನು ವಿಧಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಮಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಪುರಸ್ಕರಿಸಿದರು.
ವಿಚಾರಣೆ ವೇಳೆ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ ಹೈಕೋರ್ಟ್, ಮೇಲ್ಮನವಿದಾರರ ಆದಾಯ 31.35 ಲಕ್ಷ ರೂ ಆಗಿದ್ದು, ಅವರ ಆಸ್ತಿ 20.44 ಲಕ್ಷ ರೂ ಆಗಿದೆ. ಆಸ್ತಿಗಿಂತಲೂ ಆದಾಯ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಅಕ್ರಮ ಆಸ್ತಿಗಳು ಪತ್ತೆಯಾಗಿಲ್ಲ. ಪ್ರಕರಣ ಸಂಬಂಧ ಇಲಾಖಾ ವಿಚಾರಣೆಯಲ್ಲಿ ಆರೋಪಿಯನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


