ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ
ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಹಲವು ಕಡೆ ಗುರುವಾರ ರಾತ್ರಿ ಗುಡುಗು ಸಹಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಹಲವು ಕಡೆ ಗುರುವಾರ ರಾತ್ರಿ ಗುಡುಗು ಸಹಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ದಿಢೀರ್ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡಿದ್ದು, ಕೆಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆಬ್ಬಾಳದಲ್ಲಿ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ.
ಬೆಂಗಳೂರು ಮಾತ್ರವಲ್ಲದೆ ದೊಡ್ಡಬಳ್ಳಾಪುರ, ಮಂಡ್ಯ, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಗುರುವಾರ ಉತ್ತಮ ಮಳೆಯಾಗಿದೆ.
ಈ ಮಧ್ಯೆ, ಸೆಪ್ಟೆಂಬರ್ 2 ರಿಂದ 7 ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


