ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ತಮಿಳುನಾಡಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹೊತ್ತಿನಲ್ಲೇ ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ತಮಿಳುನಾಡಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹೊತ್ತಿನಲ್ಲೇ ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು.. ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮಳೆರಾಯ ಅಬ್ಬರಿಸಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಆದರೂ ಇದೇ ಸಂದರ್ಭದಲ್ಲಿ ಭಾರೀ ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಉದ್ಯಾನ ನಗರಿಯಾದ್ಯಂತ ದಟ್ಟಮೋಡಗಳು ಆವರಿಸಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ ರಾಜ್ಯದ ಹಲವು ಭಾಗಗಳಲ್ಲಿ ನಿನ್ನೆ ರಾತ್ರಿಯೂ ವರುಣನ ಸಿಂಚನವಾಗಿದ್ದು, ನಿನ್ನೆ ಸಂಜೆಯಿಂದ ಮೋಡ ಕವಿದ ವಾತಾವರಣ ಮುಂದುವರೆದಿದೆ.
ಬೆಂಗಳೂರು ಮಾತ್ರವಲ್ಲದೇ ಉತ್ತರ ಕನ್ನಡ, ಬಾಗಲಕೋಟೆ, ಉಡುಪಿ, ಗದಗ, ಕೊಪ್ಪಳ, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ವಿಜಯಪುರ, ಬೀದರ್, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬಳ್ಳಾರಿ, ಚಿಕ್ಕಬಳ್ಳಾಪುರಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


