ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!
ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.

ಬೆಂಗಳೂರು: ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.
ಎನ್‌ಸಿಆರ್‌ಬಿ ವರದಿ ಪ್ರಕಾರ, ನಗರದಲ್ಲಿ ಆ್ಯಸಿಡ್ ದಾಳಿಯ ಆರು ಘಟನೆಗಳು ವರದಿಯಾಗಿದ್ದು, ಇದು ದೇಶದ ಯಾವುದೇ ಮೆಟ್ರೋಪಾಲಿಟನ್ ನಗರದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣವಾಗಿದೆ. ನಗರದಲ್ಲಿ 151 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 149 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತಿಳಿದಿರುವ ವ್ಯಕ್ತಿಗಳಿಂದಲೇ ನಡೆದಿವೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳೆಂದು ವರ್ಗೀಕರಿಸಲಾದ ಅಪಹರಣ, ಮಾನವ ಕಳ್ಳಸಾಗಣೆ, ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ಹಲ್ಲೆಗಳಂತಹ ಗಮನಾರ್ಹ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ.
ವಾರ್ಷಿಕ ಅಪರಾಧ ವರದಿ ಪ್ರಕಾರ, 2020ಕ್ಕೆ ಹೋಲಿಸಿದರೆ, 1,194 ಪ್ರಕರಣಗಳು ಏರಿಕೆಯಾಗಿದ್ದು, 2020 ಮತ್ತು 2021 ಎರಡನ್ನೂ ಮೀರಿಸಿವೆ. 639 ಅಪಹರಣ ಪ್ರಕರಣಗಳ ಜೊತೆಗೆ, 763 ಮಹಿಳೆಯರ ಮೇಲಿನ ಹಲ್ಲೆ ಪ್ರಕರಣಗಳು ಸೇರಿದಂತೆ ಹೆಚ್ಚಿನ ವಿಭಾಗಗಳಲ್ಲಿ, ಬೆಂಗಳೂರು ನಗರವು ದೆಹಲಿ ಮತ್ತು ಮುಂಬೈ ನಂತರ ಮೂರನೇ ಸ್ಥಾನದಲ್ಲಿದೆ.
ಬೆಂಗಳೂರಿನಲ್ಲಿ 50 ಮಾನವ ಕಳ್ಳಸಾಗಣೆ ಪ್ರಕರಣಗಳು ವರದಿಯಾಗಿದ್ದು, ದೆಹಲಿಯಲ್ಲಿ 53 ಪ್ರಕರಣಗಳು ವರದಿಯಾಗಿವೆ. ಎರಡು ಆ್ಯಸಿಡ್ ದಾಳಿ ಪ್ರಕರಣಗಳೊಂದಿಗೆ ಬೆಂಗಳೂರು ಎರಡನೇ ಸ್ಥಾನದಲ್ಲಿದ್ದರೆ, ದೆಹಲಿಯಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ.
ಐಟಿ ಹಬ್ ಎಂದು ಕರೆಯಲ್ಪಡುವ ಬೆಂಗಳೂರು ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ವರದಿ ಪ್ರಕಾರ, ಅಶ್ಲೀಲ ವಿಚಾರಗಳ ಪ್ರಕಟಣೆ ಮತ್ತು ಪ್ರಸಾರವನ್ನು ಒಳಗೊಂಡ 73 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


